Site icon newsroomkannada.com

ಮಂಗಳೂರು-ಮೂಡುಬಿದಿರೆ ಬರಪೀಡಿತ : ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಮಳೆಕೊರತೆ ಕಾರಣದಿಂದ ರಾಜ್ಯದ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಮಂಗಳೂರು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬರಪೀಡಿತ ಎಂದು ಘೋಷಿಸಲಾಗಿದೆ.

ಸಂಬಂಧ ಪಟ್ಟ ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

 

 

Exit mobile version