ಬೆಂಗಳೂರು: ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದಿಂದಲೇ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೂ ಮುನ್ನವೇ 2,000 ಬರ ಪರಿಹಾರವನ್ನು ನೀಡಲಾಗುತ್ತಿದೆ. ಈ ಹಣ ಪಡೆಯೋದಕ್ಕೆ ರೈತರು ಬಹುಮುಖ್ಯವಾಗಿ ಕೆಲಸವೊಂದನ್ನು ಮಾಡಬೇಕಿದೆ. ಒಂದು ವೇಳೆ ಆ ಕೆಲಸ ಮಾಡದೇ ಇದ್ರೆ ನಿಮ್ಮ ಖಾತೆಗೆ ಬರ ಪರಿಹಾರದ ಹಣ ಜಮಾ ಆಗೋದಿಲ್ಲ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ.