Site icon newsroomkannada.com

ಪಶ್ಚಿಮ ಬಂಗಾಳ ಚುನಾವಣಾ ಹಿಂಸಾಚಾರಕ್ಕೆ 20 ಮಂದಿ ಬಲಿ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ತೃಣಮೂಲ ಕಾಂಗ್ರೆಸ್​ನ ಕಾರ್ಯಕರ್ತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೇ ಏರಿಕೆಯಾಗಿದೆ. ಶನಿವಾರ ಬೈಷ್ಣವ ನಗರದಲ್ಲಿ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅವರನ್ನು ಮತಿಯುರ್ ರೆಹಮಾನ್ ಎಂದು ಗುರುತಿಸಲಾಗಿದೆ.
ಮತದಾನ ಕೇಂದ್ರದಲ್ಲಿ ಮತದಾನ ಮಾಡಲು ಬಂದಿದ್ದಾಗ ಕೆಲವರು ಅವನನ್ನು ಸುತ್ತುವರೆದು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆಡಳಿತಾರೂಢ ಟಿಎಂಸಿ ಈ ಹತ್ಯೆಗೆ ವಿರೋಧ ಪಕ್ಷ ಕಾಂಗ್ರೆಸ್‌ ಕಾರಣ ಎಂದು ಆರೋಪಿಸಿದೆ. ಘರ್ಷಣೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಮೃತರಲ್ಲಿ ಟಿಎಂಸಿ ಕಾರ್ಯಕರ್ತ ಅಜಹರ್ ಲಷ್ಕರ್ ಕೂಡ ಸೇರಿದ್ದಾರೆ. ಬಸಂತಿಯಲ್ಲಿ ನಡೆದ ಘರ್ಷಣೆಯಲ್ಲಿ ಗಾಯಗೊಂಡರು ಮತ್ತು ನಿನ್ನೆ ತಡರಾತ್ರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಗಾಯಗೊಂಡಿದ್ದಾರೆ. ಕ್ಷಿಣ 24 ಪರಗಣದ ಬಸಂತಿಯಲ್ಲಿ ಟಿಎಂಸಿ ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ನಡುವೆ ಘರ್ಷಣೆ ನಡೆದಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಲಷ್ಕರ್ ಮೃತಪಟ್ಟಿದ್ದಾರೆ.

Exit mobile version