ಇಂಗ್ಲೆಂಡ್ ತಂಡದ ಪ್ರಮುಖ ಆಲ್ರೌಂಡರ್ಗಳಲ್ಲಿ ಒಬ್ಬರಾಗಿರುವ ಡೆವಿಡ್ ವಿಲ್ಲಿ, ಈ ಬಾರಿಯ ವಿಶ್ವಕಪ್ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ. 2015 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ ಡೇವಿಡ್ ವಿಲ್ಲಿ 70 ಏಕದಿನ ಪಂದ್ಯಗಳಿಂದ 627 ರನ್ ಕಲೆಹಾಕಿದ್ದಾರೆ. ಹಾಗೆಯೇ 94 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್ನಲ್ಲಿ 43 ಪಂದ್ಯಗಳಿಂದ 226 ರನ್ ಹಾಗೂ 51 ವಿಕೆಟ್ ಕಬಳಿಸಿದ್ದಾರೆ.
ನಾನು ಬಾಲ್ಯದಿಂದಲೂ ಇಂಗ್ಲೆಂಡ್ ಪರ ಆಡಬೇಕೆಂಬ ಕನಸು ಕಂಡಿದ್ದೆ. ಈ ಕನಸುಗಳು ಈಡೇರಿವೆ. ಇದೀಗ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದೆ. ಅದರಂತೆ ವಿಶ್ವಕಪ್‌ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ತಿಳಿಸಿದ್ದಾರೆ.
ಅದರಂತೆ ಈ ಬಾರಿಯ ವಿಶ್ವಕಪ್ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಪಂದ್ಯವು ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಮೂಲಕ 33 ವರ್ಷದ ಎಡಗೈ ಆಲ್ರೌಂಡರ್ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
Thank you, David Willey ❤️ pic.twitter.com/4wkeVGAYXq
— England Cricket (@englandcricket) November 1, 2023