ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು (Deadline) ಒಂದು ತಿಂಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಇದೀಗ ರಿವರ್ಸ್ ಬ್ಯಾಂಕ್ (RBI) ಸ್ಪಷ್ಟನೆ ನೀಡಿದ್ದು, 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್ 7ವರೆಗೆ ಅವಕಾಶ ನೀಡಲಾಗುವುದು ಎಂದು ಇಂದು (ಸೆ.30) ಹೇಳಿದೆ.