ಬೀದರ್: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), ಮಕ್ಕಳಾದ ತನು (6), ಸಾಯಿರಾಜ್ (5) ಆತ್ಮಹತ್ಯೆಗೆ ಶರಣಾದವರು. ಸ್ಥಳಕ್ಕೆ ಹುಮ್ನಾಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಬಾವಿಯಿಂದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.