main logo

ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ

ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ

ಚಿಕ್ಕಮಗಳೂರು, ಫೆ.8: ಜಿಲ್ಲೆಯಲ್ಲಿ ಮಂಗನ ಕಾಯಿಲೆ (Monkey disease) ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ತಪಾಸಣೆಗೆ ಒಳಪಡಿಸಿದ ಏಳು ಜನರ ಪೈಕಿ 55 ವರ್ಷದ ಮಹಿಳೆಗೆ ಮಂಗನ ಕಾಯಿಲೆ ಸೋಂಕು ವಕ್ಕರಿಸಿರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ

ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಒಂಬತ್ತು ಮಂಗನ ಕಾಯಿಲೆ ಪ್ರಕರಣಗಳ ಪೈಕಿ ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ, ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

China reports first Monkey B virus death, Veterinary doctor dies to infection

ಕೆಎಫ್​ಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಸಿದೆ. ಶಿವಮೊಗ್ಗ-ಉತ್ತರಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಪ್ರತಿ ವರ್ಷ KFD ಸೋಂಕಿನ ಆತಂಕ ಇದ್ದೇ ಇರುತ್ತದೆ.

ಮಂಗನ ಕಾಯಿಲೆ ಹೆಚ್ಚುತ್ತಿರುವ ಹಾಗೂ ಸೋಂಕಿಗೆ ವೃದ್ಧ ಬಲಿಯಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾದ್ಯಂತ ಆರೋಗ್ಯ ಇಲಾಖೆ (Health Departmnet) ಹೈಅಲರ್ಟ್ ಆಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳು KFD (Kyasanur Forest Disease) ವಾರ್ಡ್ ತೆರೆದಿದೆ. ಅರಣ್ಯದಲ್ಲಿ ಕೆಎಫ್​ಡಿ ಸೋಂಕು ಹರಡದಂತೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷಧಿ ವಿತರಣೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಮೃತಪಟ್ಟಿರುವ ಮಂಗಗಳ ರಕ್ತದ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿದೆ. ಈ ಒಎಲ್​ವಿ ಎಸ್ಟೇಟ್ ಕೊಪ್ಪ ತಾಲೂಕಿನಲ್ಲಿ ಇದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್​ಡಿ ವಾರ್ಡ್ ತೆರೆದಿದೆ.

Related Articles

Leave a Reply

Your email address will not be published. Required fields are marked *

error: Content is protected !!
ನ್ಯೂಸ್‌ರೂಮ್‌ ವಾಟ್ಸ್ಅಪ್ ಗ್ರೂಪ್ ಗೆ ಸೇರಿ