Site icon newsroomkannada.com

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಬಂಟ್ವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ಸೋಮನ ಗೌಡ ಎಂಬಾತ ‘ಜೈ ಕರ್ನಾಟಕ’ ಎಂಬ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಿ ಪೋಸ್ಟ್ ಒಂದನ್ನು ಹರಿಯಬಿಟ್ಟಿದ್ದಾನೆ ಎಂದು ಆರೋಪಿಸಿ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ನಂದಾವರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Exit mobile version