ಉಡುಪಿ: ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ದಾಖಲಿಸಿದ್ದಾರೆ.
ಈ ಸಂಬಂಧ ಕಾಲೇಜು ನಿರ್ದೇಶಕಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮೂವರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ ಎಂದಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಪ್ರೇರಿತವಾಗಿ ದೂರು ನೀಡಬೇಕು, ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಗ್ರ ತನಿಖೆಗೆ ಆಗ್ರಹ ವ್ಯಕ್ತವಾಧ ಬೆನ್ನಲ್ಲೇ, ಇದೀಗ ಮಲ್ಪೆ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ