ಮಂಗಳೂರು: ಬಾವುಟ ಗುಡ್ಡೆ ವಿಮಾ ಕಚೇರಿಯಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅನಾಹುತವಾಗಿದ್ದು, ಕಂಪ್ಯೂಟರ್, ಎಸಿ, ಮತ್ತಿತರ ಪರಿಕರಗಳು ಸುಟ್ಟು ಹೋಗಿದ್ದು, ಪಾಂಡೇಶ್ವರ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ವಿಮಾ ಕಚೇರಿ ಕಟ್ಟಡದ ಮೂರನೇ ಅಂತಸ್ತಿನಲ್ಲಿದ್ದು, ದಟ್ಟ ಹೊಗೆ ಆವರಿಸಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
