Site icon newsroomkannada.com

ಬಾವುಟಗುಡ್ಡೆ ಅಪಾರ್ಟ್‌ಮೆಂಟ್‌’ನ 21 ನೇ ಮಹಡಿಯಲ್ಲಿ ಅಗ್ನಿ ಅವಘಡ

ಮಂಗಳೂರು: ನಗರದ ಬಾವುಟಗುಡ್ಡೆಯ ಅಭಿಮಾನ್ ಹಿಲ್ಸ್ ವಸತಿ ಸಮುಚ್ಚಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ವಸತಿ ಕಟ್ಟಡದ 21ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಾಂಡೇಶ್ವರ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ನಿವಾಸಿಗಳು ತಕ್ಷಣ ಹೊರಗಡೆ ಬಂದಿದ್ದು, ಘಟನೆಯಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Exit mobile version