ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಸಚಿವ ಸ್ಥಾನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕಡಲಕೊರೆತದ ಸಮಸ್ಯೆ ಬಗ್ಗೆ ಅಧಿಕಾರಿ ಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮೀನುಗಾರರೊಂದಿಗೆ ಸಭೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೂ ಸಚಿವರು ಭೇಟಿ ನೀಡಲಿದ್ದಾರೆ.