ಜೈಪುರ: ರಾಜಸ್ಥಾನದ (Rajasthan) ಕೋಚಿಂಗ್ ಹಬ್ ಕೋಟಾದಲ್ಲಿ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಸಹ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಮುಖ ಆರೋಪಿಯೊಬ್ಬನ ಪರಿಚಯವಾಗಿತ್ತು. ಈ ಘಟನೆ ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.