ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ನೂರಾರು ಎಕರೆ ಅಪರೂಪದ ಸಸ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಬಿಸಿಲಿನ ತಾಪಕ್ಕೆ ಬೆಂಕಿ ಬೇಗ ವ್ಯಾಪಿಸಿದ ಪರಿಣಾಮ ಮುಳ್ಳಯ್ಯನಗಿರಿ ಬೆಟ್ಟ ಧಗಧಗಿಸಿ ಉರಿದಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕದಳ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಸೀತಾಳಯ್ಯನಗಿರಿ ಸಮೀಪ ಗುಡ್ಡ ಹೊತ್ತಿ ಉರಿದಿದೆ. ಬೆಟ್ಟ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಅಗ್ನಿ ಶಾಮಕದಳದ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಲು ಕಾರ್ಯಾಚರಣೆಯನ್ನು ಕೈಗೊಂಡರು.
ಕಡಿದಾದ ಬೆಟ್ಟ ಪ್ರದೇಶ ಮತ್ತು ದಟ್ಟವಾಗಿ ಆವರಿಸಿದ ಹೊಗೆಯ ಕಾರಣ ಬೆಂಕಿ ನಂದಿಸಲು ಅಗ್ನಿ ಶಾಮಕದಳದ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸಹ ಕೆಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಬೆಟ್ಟದ ಮೇಲಿಂದಲೇ ನೀರನ್ನು ಹಾಕುವ ಮೂಲಕ ಬೆಂಕಿಯನ್ನು ಹತೋಟಿಗೆ ತರಲು ಶ್ರಮಿಸಿದರು