ಬೆಂಗಳೂರು: ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.
ಅವರು ಅ.16ರಂದು ಮಂಡಿ ಶಸ್ತ್ರಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಪೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದು, ಬೊಮ್ಮಾಯಿ ಅವರ ಆರೋಗ್ಯ ತಪಾಸಣೆ ನಡೆಸಲಾಗಿತ್ತು.
ಹೃದಯದ ಕವಾಟಗಳು ಮುಚ್ಚಿಕೊಂಡಿರುವುದು ಪತ್ತೆಯಾಗಿತ್ತು. ಬಳಿಕ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.