ಮಂಗಳೂರು: ಪ್ರಭಾಕರ ಭಟ್ ಅವರನ್ನು ಹಾಡಿ ಹೊಗಳಿದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಹೇಳಿದ್ದಾರೆ.
ಅವರು ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮ ಭಾಗವಹಿಸಿದ್ದು ಹೇಗೆ ಎಂದು ಕೆಲವರು ಯೋಚಿಸಬಹುದು. ಅಂದು ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ನಾನು ತಪ್ಪು ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.
ಉತ್ತಮ ಶಿಸ್ತಿನ ಬದುಕನ್ನು ಇಲ್ಲಿ ಕಲಿಸಿ ಕೊಡಲಾಗುತ್ತದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ ಎಂದು ಹೇಳಿದರು.