newsroomkannada.com

ಕೈಕೊಟ್ಟ ‘ಫಾರ್ಚೂನ್’ – ಭೀಕರ ರಸ್ತೆ ಅಪಘಾತಕ್ಕೆ ಓರ್ವ ಬಲಿ : ಇಬ್ಬರು ಗಂಭೀರ!

ಸುರತ್ಕಲ್: ಇಲ್ಲಿನ ಹೊಸಬೆಟ್ಟು ಜ್ಯೋತಿ ಸರ್ವಿಸ್ ಸ್ಟೇಷನ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಸೆ.30) ಮುಂಜಾನೆ 2.30ರ ಸುಮಾರಿಗೆ ಸಂಭವಿಸಿದೆ.

ತಮಿಳುನಾಡು ನೊಂದಣಿಯ ಈ ಫಾರ್ಚುನರ್ ಕಾರು ಈ ರೀತಿಯಾಗಿ ಭೀಕರ ಅಪಘಾತಕ್ಕೀಡಾಗಿದ್ದು, ಪೊಲೀಸರು ಮತ್ತು ಸಾರ್ವಜನಿಕರು ಸಹಕಾರದಿಂದ ಸುಮಾರು ಎರಡು ಗಂಟೆಗಳ ಕಾಲ ತೀವ್ರ ಪರಿಶ್ರಮಪಟ್ಟು ಕಾರಿನೊಳಗೆ ಸಿಲುಕಿಕೊಂಡಿದ್ದ ಶವವನ್ನು ಹೊರತೆಗೆಯಲಾಯಿತು.

ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Exit mobile version