Site icon newsroomkannada.com

ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ಬಂಟ್ವಾಳ: ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಮಂಗಳವಾರ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಯಾಣಿಕರು ಮುಂಬೈ ಮೂಲದವರಾಗಿದ್ದು, ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಂಚಾರ ಪೊಲೀಸರು ಕಾರನ್ನು ಹೊರತೆಗೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರ ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version