Site icon newsroomkannada.com

ಒಡಿಯೂರಲ್ಲಿ ಮಾರ್ಬಲ್‌ ಲೋಡಿನ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಮಾರ್ಬಲ್‌ ಲೋಡಿನ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರಗೊಂಡ ಘಟನೆ ನಡೆದಿದೆ.

ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರವಾಗಿದ್ದು, ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುಗಳು ಉತ್ತರ ಭಾರತದ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ.

ಮಾರ್ಬಲ್ ಅನ್ ಲೋಡ್ ಗಾಗಿ ಲಾರಿ ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version