Site icon newsroomkannada.com

ಗಣೇಶ ಚತುರ್ಥಿ ಆಚರಣೆ: ಸೆ.19ರಂದು ರಜೆ ಘೋಷಣೆ

Ganesh Chaturthi celebrations: Holiday declared on September 19

ಬೆಂಗಳೂರು: ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳೆಬಿದ್ದು, ಇದೀಗ ಈ ಗೊಂದಲಕ್ಕೆ ತೆರೆ ಬಿದ್ದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಇನ್ನೂ ರಾಜ್ಯದಲ್ಲಿ ಹಲವೆಡೆ ಗಣೇಶ ಹಬ್ಬ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು ಕೇಳಿಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.

Exit mobile version