Site icon newsroomkannada.com

ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಬ್ಯಾನ್?-ನಾಳೆ ಅಧಿಕೃತ ಆದೇಶ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ (Gobi Manchurian) ಬ್ಯಾನ್ ಆಗುತ್ತಾ..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ನಾಳೆ (ಸೋಮವಾರ) ಹೊರಬೀಳುವ ಸಾಧ್ಯತೆ ಇದೆ.

: ಹೊರರಾಜ್ಯಗಳಲ್ಲಿ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಬ್ಯಾನ್ ಆಗಿದೆ. ಕಾರಣ ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಆಹಾರ ಮತ್ತು ಸುರಕ್ಷತಾ ಇಲಾಖೆ ಹೋಟೆಲ್, ಬೀದಿಬದಿ ವ್ಯಾಪಾರ ಮಾಡುವ ವ್ಯಾಪಾರಸ್ಥರ ಬಳಿ ಕಾಂಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹಿಸಿ ಟೆಸ್ಟ್ ಮಾಡಿದೆ. ಈ ಟೆಸ್ಟ್‍ನಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ರಂಡೋಮನ್ ಬಿ ಅಂಶ ಇರೋದು ಪತ್ತೆಯಾಗಿದೆ. ಜೊತೆಗೆ ಗೋಬಿ ಮಂಚೂರಿಗೆ ಹಾಕುವ ಕಲರ್ ಜಲ್ಲಿಗಳನ್ನ ಟೌನ್ ಟೆಸ್ಟ್‍ಗೆ ಒಳಪಡಿಸಿದಾಗ ಅದರಲ್ಲೂ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ಬ್ಯಾನ್ ಮಾಡುವ ಸಾಧ್ಯತೆ ಇದೆ.

ಕೃತಕ ಬಣ್ಣ ಬೆರಸಿ ಗೋಬಿ ಮಾಡುವುದಕ್ಕೆ ಅವಕಾಶ ಇಲ್ಲ. ಆಹಾರ ಸುರಕ್ಷತೆ ಕಾಯ್ದೆಯಡಿ 10 ಲಕ್ಷದ ವರೆಗೂ ದಂಡ ವಿಧಿಸುವ ಸಂಭವ ಇದೆ. ಈ ಬಗ್ಗೆ ನಾಳೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.

Exit mobile version