Site icon newsroomkannada.com

ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೊಂದು ಸಂತಸದ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 200 ರೂನಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ.

ಕೇಂದ್ರ ಸಂಪುಟ ಇಂದು ತೆಗೆದುಕೊಂಡ ನಿರ್ಧಾರಗಳಲ್ಲಿ ಇದೂ ಒಂದಾಗಿದೆ. ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್​ಪಿಜಿ ಸಬ್ಸಿಡಿ ಏರಿಸಿರುವ ವಿಚಾರವನ್ನು ತಿಳಿಸಿದ್ದಾರೆ.

Exit mobile version