Site icon newsroomkannada.com

ಜನರಿಗೆ ಗುಡ್‌ ನ್ಯೂಸ್‌ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ನವದೆಹಲಿ: ಗ್ರಾಹಕರಿಗೆ ಶುಭ ಸುದ್ದಿಯೊಂದಿದೆ. ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿವೆ. ಜನವರಿ 1ರಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆ ದೇಶದ ಕೆಲವು ನಗರಗಳಲ್ಲಿ ತುಸು ಕಡಿಮೆಯಾಗಿದೆ. ಆದರೆ, ಬೆಲೆ ಇಳಿಕೆ ಪ್ರಮಾಣದಲ್ಲಿ ಪ್ರಮುಖ ನಗರಗಳಿಗೆ ವ್ಯತ್ಯಾಸವಿದೆ. ದೇಶದ ಯಾವ ನಗರದಲ್ಲಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿ ಇಲ್ಲಿದೆ. ಬೆಲೆ ಇಳಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದೆ. ಈ ಮೊದಲು ಈ ದರ 1,757 ರೂ. ಇತ್ತು. ಹೀಗಾಗಿ ದೆಹಲಿಯಲ್ಲಿ ಒಂದೂವರೆ ರೂಪಾಯಿಯಷ್ಟು ಬೆಲೆ ಇಳಿಕೆಯಾದಂತಾಗಿದೆ. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದೆ ಮತ್ತು 19 ಕೆಜಿ ಸಿಲಿಂಡರ್ ಬೆಲೆ ಈಗ 1,924.50 ರೂ. ಆಗಿದೆ.

ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1.50 ರೂಪಾಯಿ ಇಳಿದು 1,708.50 ರೂಪಾಯಿಗೆ ತಲುಪಿದೆ. ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಂದು 50 ಪೈಸೆ ಏರಿಕೆಯಾಗಿದ್ದು, 1,869 ರೂ.ಗೆ ಆಗಿದೆ.

Exit mobile version