ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.
ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ ಇಲಾಖೆಯು ಬಿರು ಬೇಸಗೆ ಮತ್ತು ಅಧಿಕ ಮಳೆಯ ಕಾರಣದಿಂದಾಗಿ ನಿರ್ಬಂಧ ವಿಧಿಸಿತ್ತು. ಆ ಬಳಿಕ ಸೆ. 30ರಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿತ್ತು.