ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ ಜಾರಿಗೆ ತಂದಿದೆ. ಯೋಜನೆ ಪ್ರಯೋಜನ ಪಡೆಯಲು ಮಹಿಳೆಯರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದು ಟಿಕೆಟ್ ಬುಕ್ಕಿಂಗ್ ಮಾಡುತ್ತಿದ್ದಾರೆ. ನಾರ್ಮಲ್ ಬಸ್ ಗಳಿಗೆ ಟಿಕೆಟ್ ಬುಕ್ ಮಾಡಲು ಕೆಎಸ್ಆರ್‌ಟಿಸಿ ಆ್ಯಪ್ ನಲ್ಲಿ ಅವಕಾಶ ನೀಡಲಾಗಿದೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು 20 ರೂಪಾಯಿ ಮಾತ್ರ ಪಾವತಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿಸಲು ಮುಂದಾಗಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಸಂಸ್ಥೆಯ ವೈಬ್ ಸೈಟ್ ಸರ್ವರ್ ಮೇಲೆ ಭಾರೀ ಟ್ರಾಫಿಕ್ ಪ್ರಭಾವ ಬೀರಿದ್ದು ಅದು ನಿಷ್ಕ್ರಿಯಗೊಂಡು , ಡೌನ್ ಆಗಿದೆ. ಇದರಿಂದ ಟ್ವಿಟರ್ ನಲ್ಲಿ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗುತ್ತಿದೆ. ಸೀಟ್ ಬುಕ್ ಆಗುತ್ತಿಲ್ಲ ಎಂದು ಟ್ವೀಟ್ ಮಾಡಿ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಕೆಎಸ್ಆರ್‌ಟಿಸಿ ಸಹಾಯವಾಣಿಗೆ ಕರೆ ಮಾಡಿದರೆ ನೋ ರೆಸ್ಪಾನ್ಸ್ ಬರುತ್ತಿದೆ ಎಂದೂ ಮಹಿಳೆಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
