Site icon newsroomkannada.com

ಯುವತಿ ಸ್ನಾನ ಮಾಡುವ ವಿಡಿಯೋ ಚಿತ್ರೀಕರಣ ಮಾಡಿದ ಜಿಮ್ ಕೋಚ್ ಬಂಧನ

ಬೆಂಗಳೂರು: ರಾಮಮೂರ್ತಿನಗರದಲ್ಲಿ ಜಿಮ್ ತರಬೇತುದಾರನೊಬ್ಬ , ವರ್ಕೌಟ್ ಮಾಡಿದ ನಂತರ ಫಿಟ್ನೆಸ್ ಸೆಂಟರ್​ನಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿ ಸ್ನಾನ ಮಾಡುತ್ತಿದ್ದಾಗ ಜಿಮ್ ಕೋಚ್ ಸಿಬಿಯಾಚನ್, ಕಿಟಕಿಯ ಮೂಲಕ ಮೊಬೈಲ್​ನಲ್ಲಿ ಸೆರೆ ಹಿಡಿಯುತ್ತಿದ್ದನು. ಅನುಮಾನಗೊಂಡು ಹೊರಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ತಕ್ಷಣವೇ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಕೋಚ್ ಸಿಬಿಯಾಚನ್ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಿದ ವಿಚಾರ ಬೆಳಕಿಗೆ ಬಂದಿದೆ. ಬಳಿಕ ರಾಮಮೂರ್ತಿನಗರ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Exit mobile version