Site icon newsroomkannada.com

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್

ಹೈದರಾಬಾದ್: ಆಂಧ್ರಪ್ರದೇಶದ ಕಡಪಾದಲ್ಲಿ ಹೆಡ್ ಕಾನ್ಸ್ಟೇಬಲ್ ಓರ್ವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಟ್ಟು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಭವಿಸಿದೆ.

ವೆಂಕಟೇಶ್ವರಲು(55) ಪತ್ನಿ ಹಾಗೂ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ವೆಂಕಟೇಶ್ವರಲು ಕಡಪಾದ ಎರದು ಟೌನ್ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ತಡರಾತ್ರಿ 11 ಗಂಟೆಯವರೆಗೂ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬಳಿಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಗೂ ತೆರಳಿದ್ದರು. ಆನಂತರದಲ್ಲಿ ಮನೆಗೆ ತೆರಳಿದ್ದ ವೆಂಕಟೇಶ್ವರಲು ಪಿಸ್ತೂಲ್ ನಿಂದ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೆಡ್ ಕಾನ್ಸ್ ಟೇಬಲ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಮೂಲಗಳ ಪ್ರಕಾರ ಹೆಡ್ ಕಾನ್ಸ್ ಟೇಬಲ್ ವೆಂಕಟೇಶ್ವರಲು ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಅಪಾರ ನಷ್ಟಕ್ಕೀಡಾಗಿದ್ದರು. ಅಲ್ಲದೇ ಕೆಲ ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ತಿಳಿದುಬಂದಿದೆ.

Exit mobile version