Site icon newsroomkannada.com

ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ ಜೂನ್‌ 15ರವರೆಗೆ ಎಲ್ಲೋ ಅಲರ್ಟ್‌

Heavy rain forecast in Udupi, Dakshina Kannada alert somewhere till June 15

ಬೆಂಗಳೂರು: ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

Exit mobile version