Site icon newsroomkannada.com

ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

 

 

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.

 

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ

 

ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ನಸುಕಿನಿಂದ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ವಾತಾವರಣ ತಂಪಾಗಿಸಿದೆ. ರಾತ್ರಿಯಿಂದ ಮೋಡ ಕವಿದ ವಾತಾವರಣ ಇತ್ತು.

 

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಐದು ದಿನಗಳಲ್ಲಿ ಗಂಗಾನದಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಹಾಗೂ ಒಡಿಶಾದಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಪಶ್ಚಿಮ ಬಂಗಾಳ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂವನೆ ನೀಡಿದೆ.

Exit mobile version