ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.
ಕುಮಟಾ, ಮಡಿಕೇರಿ, ಭಾಗಮಂಡಲ, ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪಣಂಬೂರು, ಮುಲ್ಕಿ, ಬೆಳ್ತಂಗಡಿ, ಕುಂದಾಪುರ, ಕಾರ್ಕಳ, ಕೋಟ, ಸಿದ್ದಾಪುರ, ಮಂಕಿ, ಅಂಕೋಲಾ, ಗೇರುಸೊಪ್ಪದಲ್ಲಿ ಮಳೆಯಾಗಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ.