Site icon newsroomkannada.com

ಕರಾವಳಿಯ ಹಲವೆಡೆ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Heavy rains likely in coastal areas, yellow alert sounded

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರ್ಗಿ, ರಾಯಚೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ತಾಪಮಾನ 2 ಡಿಗ್ರಿಗಳಷ್ಟು ಹೆಚ್ಚಾಗುವ (heavy rain: ) ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ

Exit mobile version