Site icon newsroomkannada.com

ʼಕಾಂತಾರʼ ದಲ್ಲಿ ನಟಿಸಲು ಇಲ್ಲಿದೆ ಅವಕಾಶ

ರಿಷಬ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ʼಕಾಂತಾರʼ ದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ಹೇಳಿದೆ. ಸಿನಿಮಾದಲ್ಲಿ ನಟಿಸಲು 30 ರಿಂದ 60 ರ ವಯಸ್ಸಿನ ಪುರುಷರು ಬೇಕಾಗಿದ್ದಾರೆ. ಇನ್ನು 18 ರಿಂದ 60ರ ವಯಸ್ಸಿನ ಮಹಿಳೆಯರು ಬೇಕಾಗಿದ್ದಾರೆ ಎಂದು ರಿಷಬ್‌ ಶೆಟ್ಟಿ ಪೋಸ್ಟ್‌ ನಲ್ಲಿ ಹೇಳಿದ್ದಾರೆ.

ನೋಂದಣಿಗಾಗಿ Kantara.film ಲಿಂಕ್‌ ಒತ್ತಿ ತಮ್ಮ ಪ್ರತಿಭೆಯನ್ನು ತೋರಿಸಬಹುದು. ರೀಲ್ಸ್‌ ಮತ್ತು ಅವುಗಳನ್ನೇ ಹೋಲುವ ಇತರೆ ವಿಷಯಗಳನ್ನು  ಸ್ವೀಕರಿಸುವುದಿಲ್ಲ ಎಂದು ಚಿತ್ರತಂಡ ಹೇಳಿದೆ. ಡಿ.14 ರವರೆಗೆ ಲಿಂಖ್ ಚಾಲ್ತಿಯಲ್ಲಿರುತ್ತದೆ.

ʼಕಾಂತಾರʼ ಪ್ರೀಕ್ವೆಲ್‌ ನಲ್ಲಿ ಪಂಜುರ್ಲಿ ದೈವದ ಮೂಲ ಹಾಗೂ ಹುಟ್ಟಿನ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 301-400 ಕಾಲದ ಕಥೆ ಇರಲಿದೆ ಎನ್ನಲಾಗಿದೆ.

ʼಕಾಂತಾರʼ ಪ್ರೀಕ್ವೆಲ್ ಈ ಬಾರಿ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಇಂಗ್ಲೀಷ್‌ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಮುಂದಿನ ವರ್ಷದ ಬೇಸಿಗೆಯಲ್ಲಿ ಸಿನಿಮಾ ರಿಲೀಸ್‌ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Exit mobile version