ಬೆಂಗಳೂರು : ಬೆಂಗಳೂರಿಮ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 18ರಂದು ನಡೆಯಲಿರುವ ಐಪಿಎಲ್ 2024 ರ ಪಂದ್ಯ ನಂ. 68 ರಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಪಂದ್ಯವು ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಸಿಎಸ್‌ಕೆ ಈ ಪಂದ್ಯದಲ್ಲಿ ಯಾವುದೇ ಅಂತರದಿಂದ ಗೆಲುವು ಸಾಧಿಸಿದರೆ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿದೆ. ಆದರೆ, ಆರ್‌ಸಿಬಿ 18 ರನ್‌ಗಳಿಗಿಂತ ಹೆಚ್ಚು ಅಂತರದಲ್ಲಿ ಅಥವಾ 18.1 ಓವರ್‌ಗಳಿಗಿಂತ ಒಳಗೆ ಗೆಲ್ಲಬೇಕು.
ಆರ್‌ಸಿಬಿ ಆಡಿರುವ 13 ಪಂದ್ಯಗಳಲ್ಲಿ 6 ಗೆಲುವು ಹಾಗೂ 7 ಸೋಲಿನೊಂದಿಗೆ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಸಿಎಸ್‌ಕೆ ಆಡಿರುವ 13 ಪಂದ್ಯಗಳಲ್ಲಿ 7 ಗೆಲುವು ಹಾಗೂ 6 ಸೋಲಿನೊಂದಿಗೆ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ತಂಡ ಪ್ಲೇ-ಆಫ್‌ಗೆ ಪ್ರವೇಶಿಸಬೇಕಾದರೆ ಆರ್‌ಸಿಬಿ ವಿರುದ್ಧದ ಒಂದು ಗೆಲುವು ಸಾಕು. ಸಿಎಸ್‌ಕೆ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್‌ಗಳ ಅಂತರದಿಂದ ಗೆಲ್ಲಬೇಕಿದೆ.