main logo

ರಾಮನಿಗೆ ಅವಹೇಳನ ಆರೋಪ; ಮಂಗಳೂರಿನ ಶಾಲಾ ಶಿಕ್ಷಕಿ ಅಮಾನತು..

ರಾಮನಿಗೆ ಅವಹೇಳನ ಆರೋಪ; ಮಂಗಳೂರಿನ ಶಾಲಾ ಶಿಕ್ಷಕಿ ಅಮಾನತು..

ಶ್ರೀರಾಮನಿಗೆ ಅವಹೇಳನ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದ ಹಿನ್ನಲೆ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಫೆಬ್ರವರಿ 8ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡಿದ್ದ ಶಿಕ್ಷಕಿ ಸಿಸ್ಟರ್ ಪ್ರಭಾ ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ನಂತರ ಪೋಷಕರು ಮತ್ತು ಹಿಂದೂ ಕಾರ್ಯಕರ್ತರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಹಿಂದೂಗಳ ಅಸ್ಮಿತೆ ಶ್ರೀರಾಮನ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ ಸದಸ್ಯರು, ತನಿಖೆ ಪೂರ್ಣಗೊಳ್ಳುವವರೆಗೂ ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಪೋಷಕರು, ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಈ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ತಡೆದರು.

ಆಡಳಿತ ಮಂಡಳಿಯ ಸದಸ್ಯರು ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಶಿಕ್ಷಕಿಯನ್ನು ಅಮಾನತು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದರು. ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!