ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಕಡಬ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕಡಬ ತಹಸೀಲ್ದಾರ್ ರಮೇಶ್ ಬಾಬು ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಅದರಂತೆ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಆದರೆ ತಾಲೂಕಿನ ಪಿಯು ಮತ್ತು ಪದವಿ ಕಾಲೇಜುಗಳಲ್ಲಿ ಪಾಠ ಪ್ರವಚನ ಎಂದಿನಂತೆ ನಡೆಯಲಿದೆ.
ಬಂಟ್ವಾಳ ತಾಲೂಕಿನ ಯಾವೆಲ್ಲ ಶಾಲೆಗಳಿಗೆ ರಜೆ: ಹಯತುಲ್ ಶಾಲೆ ಗೂಡಿನ ಬಳಿ, ಕಿರಿಯ ಪ್ರಾಥಮಿಕ ಶಾಲೆ ವಳವೂರು, ಶಾರದ ಮತ್ತು ಎಸ್ ಎಲ್ ಎನ್ ಪಿ ಪಾಣೆಮಂಗಳೂರು ,ಎಲ್ ಸಿ ಆರ್ ಕಕ್ಕೆ ಪದವು, ಕೆಪಿಎಸ್ ಮೊಂಟೆಪದವು, ಕುನಿಲ್ ಶಾಲೆ ತುಂಬೆ. ಬಿ ಎ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆ ಪೆರ್ಲಬಿಯಪಾದೆ ಶಾಲೆ, ಸರಪಾಡಿ ಪ್ರೈಮರಿ ಶಾಲೆ, ಹೆಗಡೆ ಶಾಲೆ, ಪೂಪಾಡಿ ಕಟ್ಟಿ ಶಾಲೆ, ದಡ್ಡಲಕಾಡು, ಎರ್ಮಾಳ್ ಪದವು ಮಜ್ಲಿಸ್ ಶಾಲೆಗಳಿಗೆ ಬಂಟ್ವಾಳ ತಾಲೂಕು ಆಡಳಿತ ರಜೆ ಘೋಷಿಸಿದೆ.
ಸುಳ್ಯ ತಾಲೂಕಿನ ವಿವರ: ಸುಳ್ಯ ತಾಲೂಕಿನ ಆಯ್ದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು, ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ದೇವರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನೇಲ್ಯಡ್ಕ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಲ್ಕುಂದ ಸರ್ಕಾರಿ ಪ್ರಾಥಮಿಕ ಶಾಲೆ, ಹರಿಹರ ಕ್ಲಸ್ಟರ್ ನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ನೆಲ್ಯಾಡಿಯ ಬೆಥನಿ ಜ್ಞಾನೋದಯ ಶಾಲಾ ಆಡಳಿತ ಮಂಡಳಿ ಶಾಲೆಗಳಿಗೂ ರಜೆ ನೀಡಲಾಗಿದೆ.