ಕಾಸರಗೋಡು: ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಈ ಕಾರಣದಿಂದ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, , ಜುಲೈ 4ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಸರ್ಕಾರಿ ಶಾಲೆಗಳು, ಸಿಬಿಎಸ್ಇ, ಐಸಿಎಸ್ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಇಂಪಾ ಶೇಖರ್ ಘೋಷಿಸಿದ್ದಾರೆ. ಆದರೆ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ