ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ವೇಳೆ ಕೆಲಸ ಮಾಡುವ ಕಾರ್ಮಿಕರು, ಉದ್ಯೋಗಿಗಳು ಹೋಟೆಲ್ ಓಪನ್ ಇಲ್ಲ ಎಂದು ಚಿಂತೆ ಮಾಡಬೇಕಿಲ್ಲ, ಬೆಂಗಳೂರಿನಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಹೋಟೆಲ್‌ಗಳು ಮತ್ತು ರೆಸ್ಟೊರೆಂಟ್‌ಗಳನ್ನು ದಿನದ 24 ಗಂಟೆ ತೆರೆಯಲು ಅವಕಾಶ ನೀಡಬೇಕು ಎಂಬುದು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಬಹಳ ದಿನಗಳ ಬೇಡಿಕೆ ಬಾಕಿ ಉಳಿದಿದೆ. ಈ ಹಿಂದೆ ಬಿಜೆಪಿ ರಾಜ್ಯ ಸರ್ಕಾರ ಇದನ್ನು ಒಪ್ಪಿಕೊಂಡಿದ್ದರೂ, ಭದ್ರತಾ ಕಾರಣಗಳಿಂದ ಯಾವುದೇ ದೃಢ ನಿರ್ಧಾರ ಕೈಗೊಂಡಿರಲಿಲ್ಲ.
ಸಂಘದ ಸದಸ್ಯರೊಂದಿಗೆ ಶನಿವಾರ ಸಭೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರು. ಡಿಸಿಎಂ ಅವರನ್ನು ಭೇಟಿ ಮಾಡಿ ನಗರದಲ್ಲಿ 24 ಗಂಟೆಗಳ ಕಾಲ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಶಿವಕುಮಾರ್ ನಮ್ಮ ಬೇಡಿಕೆ ಆಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಒಂದು ವಾರ ಅಥವಾ 10 ದಿನಗಳಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೊರೆಂಟ್‌ಗಳು ದಿನದ 24 ಗಂಟೆ ತೆರೆಯಲು ಅನುಮತಿ ನೀಡುವ ಆದೇಶ ಹೊರಬೀಳಬಹುದುಎಂದು ಸಂಘದ ಅಧ್ಯಕ್ಷ ಪಿಸಿ ರಾವ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.