main logo

HSRP Number Plate ಅವಧಿ ಮತ್ತೆ ವಿಸ್ತರಿಸಿದ ಸರ್ಕಾರ

HSRP Number Plate ಅವಧಿ ಮತ್ತೆ ವಿಸ್ತರಿಸಿದ ಸರ್ಕಾರ

ವಿಧಾನ ಪರಿಷತ್: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದಿದೆ. ಈ ವಿಚಾರವು ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಚರ್ಚೆಯಾಗಿದೆ. ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೂ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್‌ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈವರೆಗೆ ಹೆಚ್ಚಿನ ವಾಹನಗಳು ನೋಂದಣಿ ಮಾಡಿಸಿಕೊಂಡಿಲ್ಲ. 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ಇದರ ಬಗ್ಗೆ ಆನ್‌ಲೈನ್‌ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜತೆಗೆ ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಆಗ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ನೋಂದಣಿಯನ್ನು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರವೂ ಚಿಂತನೆ ನಡೆಸಿದ್ದು, ಮತ್ತೆ ಮೂರು ತಿಂಗಳು ಮುಂದಕ್ಕೆ ಹಾಕುತ್ತೇವೆ. ಅಲ್ಲದೆ, ಈ ಸಂಬಂಧ ಆನ್‌ಲೈನ್ ವಂಚನೆ ಬಗ್ಗೆ ಗಮನಹರಿಸುತ್ತೇವೆ ಎಂದು ಹೇಳಿದರು.

ಈಗ ಮತ್ತೆ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಆದರೆ, ದಿನಾಂಕವನ್ನು ಹೇಳಿಲ್ಲ. ಹೀಗಾಗಿ ಈಗಿನ ದಿನಾಂಕಕ್ಕೆ ಸರಿಯಾಗಿ ಮುಂದಕ್ಕೆ ಹಾಕಿದರೆ ಮೇ 17ರವರೆಗೆ ಅವಕಾಶವನ್ನು ನೀಡಿದಂತಾಗಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ನಿಖರ ಮಾಹಿತಿ ಗೊತ್ತಾಗಲಿದೆ. ಈ ಮೊದಲು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ಫೆ. 17 ಕೊನೇ ದಿನ ಎಂದು ತಿಳಿಸಲಾಗಿತ್ತು. ಈಗ ಮುಂದಕ್ಕೆ ಹೋಗಿರುವುದು ವಾಹನ ಸವಾರರು ಅಲ್ಪ ನಿರಾಳವಾಗುವಂತೆ ಮಾಡಿದಂತಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!