ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅರ್ಭಟ ಕಡಿಮೆಯಾಗಿದ್ದು, ಮಳೆ ತೀವ್ರತೆ ಕಡಿಮೆಯಾದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿಪತ್ತು ನಿರ್ವಹಣೆ ಕುರಿತು ವಿಶೇಷ ಸಭೆ ನಡೆಸಿದರು. ಮಳೆ ಹಾನಿ ಸಂಭವಿಸದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶುಕ್ರವಾರ ಬಂಟ್ವಾಳದಲ್ಲಿ ಗುಡ್ಡ ಕುಸಿತದಿಂದ ಮಹಿಳೆ ಮೃತಪಟ್ಟಿದ್ದು, ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸಚಿವರು ಸೂಚನೆ ನೀಡಿದರು. ಅಪಾಯದ ಮುನ್ಸೂಚನೆಯಿರುವ ಪ್ರದೇಶದ ಜನರನ್ನ ಬೇರೆಡೆ ಸ್ಥಳಾತರಿಸುವಂತೆ ನಿರ್ದೇಶನ ನೀಡಿದರು. ಈ ನಡುವೆ ವಿಪರೀತ ಮಳೆಯಿಂದಾಗಿ ತುಂಬೆ ವೆಂಟೆಡ್ ಡ್ಯಾಮ್ ನ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರಸ್ತುತ ಸುಮಾರು 4.70 ಮೀಟರ್ ನಷ್ಟು ನೀರು ಸಂಗ್ರಹವಾಗಿದೆ.