ಅಹಮದಾಬಾದ್: ಇಂದು ಹೈ ವೋಲ್ಟೇಜ್ ಪಂದ್ಯಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗಲಿದೆ. ಅಕ್ಟೋಬರ್ 14 ಮಧ್ಯಾಹ್ನ 2 ಗಂಟೆಗೆ ಭಾರತ ಮತ್ತು ಪಾಕಿಸ್ತಾನವು ನಡುವೆ ಮೆಗಾ ಪಂದ್ಯವನ್ನು ಆಯೋಜಿಸಲಾಗಿದೆ. ಐಸಿಸಿ ಏಕದಿನ ವಿಶ್ವಕಪ್ 2023 ರ 11ನೇ ಪಂದ್ಯದಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಉಭಯ ತಂಡಗಳು ಆಡಿದ ಮೊದಲ ಎರಡೂ ಪಂದ್ಯಗಳನ್ನು ಗೆದ್ದು ಬೀಗಿರುವ ಕಾರಣ ಇಂದಿನ ಮ್ಯಾಚ್ ಸಾಕಷ್ಟು ಕುತೂಹಲ ಕೆರಳಿಸಿದೆ. ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಕೂಡ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.
ಇಂದಿನ ಪಂದ್ಯದಲ್ಲಿ ಶುಭ್ಮನ್ ಗಿಲ್ ಆಡುವುದು ಬಹುತೇಕ ಖಚಿತವಾಗಿದೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರು ಗಿಲ್ ಶೇ. 99 ರಷ್ಟು ಆಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಬೆಂಚ್ ಕಾಯಬೇಕಿದೆ. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಭರ್ಜರಿ ಫಾರ್ಮ್ನಲ್ಲಿದ್ದು, ಪಾಕ್ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸುವುದು ಖಚಿತ ಎಂಬುದು ತಿಳಿದುಬಂದಿದೆ.