Site icon newsroomkannada.com

ಕೊಹ್ಲಿಗೆ ಮರೆಯಲಾಗದ ಉಡುಗೊರೆ ಕೊಟ್ಟ ಸಚಿನ್ ತೆಂಡೂಲ್ಕರ್ ವಿಡಿಯೋ ನೋಡಿ

Hejjenu is a man who jumps into a well to save himself from an attack

ಅಹ್ಮದಾಬಾದ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಹ್ಮದಾಬಾದ್‌ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ನ ಹೈ ವೋಲ್ಟೇಜ್‌ ಪಂದ್ಯ ನಡೆಯುತ್ತಿದೆ. ಪಂದ್ಯ ನಡೆಯುತ್ತಿದೆ. ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಕೋಟ್ಯಂತರ ಅಭಿಮಾನಿಗಳು ಟೀಮ್ ಇಂಡಿಯಾ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ. ಈ ನಡುವೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ವಿರಾಟ್ ಕೊಹ್ಲಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನ ಸಚಿನ್ ಅವರು ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿ ಧರಿಸಿದ್ದ ಜೆರ್ಸಿಯನ್ನು ವಿರಾಟ್ ಕೊಹ್ಲಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. 2011ರ ವಿಶ್ವಕಪ್‌ನಲ್ಲಿ ಭಾರತ ತಂಡ ಪ್ರಶಸ್ತಿ ಗೆದ್ದಾಗ, ಆ ತಂಡದಲ್ಲಿ ಸಚಿನ್ ಮತ್ತು ವಿರಾಟ್ ಇಬ್ಬರೂ ಜೊತೆಯಾಗಿ ಆಡಿದ್ದರು.

ವಿರಾಟ್ ಕೊಹ್ಲಿ ಸೆಮಿಫೈನಲ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ತಮ್ಮ 50ನೇ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ಅವರು ಸಚಿನ್ ಅವರ 49 ಶತಕಗಳ ದಾಖಲೆಯನ್ನು ಪುಡಿಗಟ್ಟಿದರು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸಚಿನ್ ಕೂಡ ಹಾಜರಿದ್ದರು. ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ನಡುವೆ ಉತ್ತಮ ಗೌರವದ ಸಂಬಂಧವಿದೆ. ವಿರಾಟ್ ಮಾಸ್ಟರ್ ಬ್ಲಾಸ್ಟರ್ ಅವರನ್ನು ರೋಲ್ ಮಾಡೆಲ್ ಎಂದು ಕೂಡ ಹೇಳಿದ್ದಾರೆ.
2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಈಗ ಫೈನಲ್ ಫೈಟ್ ನಡೆಯುತ್ತಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಂದು ಪ್ರಶಸ್ತಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ಪ್ಯಾಟ್ ಕಮ್ಮಿನ್ಸ್ ಅವರ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಸೆಣೆಸಾಟ ನಡೆಸುತ್ತಿದೆ. ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅತ್ತ ಆಸ್ಟ್ರೇಲಿಯಾ ಕೂಡ ಸೆಮಿಫೈನಲ್​ನಲ್ಲಿ ಆಡಿಸಿದ ಆಟಗಾರರನ್ನೇ ಫೈನಲ್​ಗೂ ಆಯ್ಕೆ ಮಾಡಿದೆ.

Exit mobile version