Site icon newsroomkannada.com

ಕರ್ತವ್ಯದ ವೇಳೆಯೇ ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತದಿಂದ ಸಾವು

ಮಂಗಳೂರು: ಕರ್ತವ್ಯದಲ್ಲಿದ್ದ ವೇಳೆಯೇ ಗುಪ್ತಚರ ಇಲಾಖೆ ಸಿಬ್ಬಂದಿ ಮೃತಪಟ್ಟ ಘಟನೆ ಉರ್ವ ಗುಪ್ತಚರ ಇಲಾಖೆ ಕಚೇರಿಯಲ್ಲಿ ನಡೆದಿದೆ. ಉರ್ವ ಮಾರಿಗುಡಿ ನಿವಾಸಿ ರಾಜೇಶ್‌ ಯು.ಬಿ. ಮೃತರು. ಶನಿವಾರ ಮಧ್ಯಾಹ್ನ ವೇಳೆ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್‌ ರೂಮ್‌ ಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಕುಸಿದುಬಿದ್ದು, ಮೃತಪಟ್ಟಿದ್ದಾರೆ. 1993 ನೇ ಬ್ಯಾಚ್‌ ನವರಾಗಿದ್ದ ಅವರು ಇನ್ನೂ ಏಳು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬೇಕಿತ್ತು.

Exit mobile version