main logo

ಇಸ್ರೇಲ್ ಯುದ್ಧ: ಕರಾವಳಿಗರನ್ನ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ- ನಳಿನ್

ಇಸ್ರೇಲ್ ಯುದ್ಧ: ಕರಾವಳಿಗರನ್ನ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ- ನಳಿನ್

ಮಂಗಳೂರು: ಇಸ್ರೇಲ್ ಮೇಲೆ ಪ್ಯಾಲೆಸ್ಟೈನ್ ನ ಹಮಾಸ್ ಉಗ್ರರ ದಾಳಿ ಹಿನ್ನೆಲೆ ಕರಾವಳಿಗರು ಆತಂಕಗೊಂಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಇಸ್ರೇಲ್‌ನಲ್ಲಿ ಐದು ಸಾವಿರ ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದರು.

ಕೇಂದ್ರ ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ. ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿಕೊಳ್ಳಲು ಸೂಚಿಸ್ತೇನೆ. ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ. ಈಗಲೂ ಇಸ್ರೇಲ್‌ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದ್ದಾರೆ. ಈಗಲೂ ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ. ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!