ಹಮಾಸ್ ಉಗ್ರರು 100ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ನಾವು ಈ ಯುದ್ಧವನ್ನು ಬಯಸಲಿಲ್ಲ. ಇದು ಅತ್ಯಂತ ಕ್ರೂರ ಮತ್ತು ಘೋರ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲ್ಪಟ್ಟಿತು. ಆದರೆ ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ಎಂದು ಹೇಳಿದ್ದಾರೆ.
ನೇತನ್ಯಾಹು ಹಮಾಸ್ ಅನ್ನು ಉಗ್ರಗಾಮಿ ಇಸ್ಲಾಮಿಕ್ ಭಯೋತ್ಪಾದಕ ಗುಂಪು ಐಸಿಸ್‌ಗೆ ಹೋಲಿಸಿದ್ದಾರೆ. ಯುಎಸ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುಕೆ ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್ ಅನ್ನು ಬೆಂಬಲಿಸುವ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.