Site icon newsroomkannada.com

ಮಂಗಳೂರು ಜೆರೋಸಾ ಶಾಲೆ ಪ್ರಕರಣ; IAS ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂತ ಜೆರೋಸಾ ಶಾಲೆಯ (St. Gerosa School) ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂದು ಕೇಳಿಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. IAS ಅಧಿಕಾರಿ ಡಾ.ಎಸ್.ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.
ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದರು.

Exit mobile version