Site icon newsroomkannada.com

ಜೆರೋಸಾ ಶಾಲೆ ಘಟನೆ ಖಂಡಿಸಿ ರಸ್ತೆ ತಡೆಯತ್ನ ; ಜೈಶ್ರೀರಾಮ್ ಘೋಷಣೆ ಕೂಗುತ್ತಲೇ ನೂರಾರು ಕಾರ್ಯಕರ್ತರ ಅರೆಸ್ಟ್

ಮಂಗಳೂರು: ಮಂಗಳೂರು ಜೇರೋಸಾ ಶಾಲೆಯ ಶಿಕ್ಷಕಿಯಿಂದ ಧರ್ಮದ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧದ ಎಫ್ ಐ ಆರ್ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಎಫ್ಐಆರ್ ಹಾಕಿದ ವಿರುದ್ಧ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜೈಶ್ರೀರಾಮ್ ಘೋಷಣೆ ಕೂಗುತಿದ್ದ ನೂರಾರು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನು ಪ್ರತಿಭಟನೆಯಲ್ಲಿ ಶಿಕ್ಷಕಿ ಪ್ರಭಾ ಬಂಧನಕ್ಕೆ ಆಗ್ರಹ ಕೇಳಿ ಬಂದಿದ್ದು, ಬಂಧಿಸಿ ಬಂಧಿಸಿ ಶಿಕ್ಷಕಿ ಪ್ರಭಾ ಬಂಧಿಸಿ ಎಂದು ಘೋಷಣೆ ಕೂಗಿದ್ದಾರೆ.

ರಾಮ ವಿರೋಧಿ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಕಮಿಷನರ್ ಕಚೇರಿಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಖಾಕಿ ಪಡೆ ಕಾರ್ಯಕರ್ತರನ್ನ ಚದುರಿಸಿ ಆಕ್ರೋಷಿತ ಬಜರಂಗದಳ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

Exit mobile version