Site icon newsroomkannada.com

ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪರ ವಕಾಲತ್ತು ವಹಿಸಿದ್ದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಿಗೆ ‘ವಜಾ’ ಭಾಗ್ಯ!

ಮಂಡ್ಯ ಜನವರಿ 19: ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪರ ವಕಾಲತ್ತು ವಹಿಸಿದ್ದು ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಇತ್ತ, ಕಲ್ಲಡ್ಕ ಪ್ರಭಾಕರ್ ಅವರಿಗೆ ಜಾಮೀನು ಕೊಡಿಸಿದ್ದಕ್ಕೆ ಕಾಂಗ್ರೆಸ್​ ಮುಖಂಡರು ಆಕ್ರೋಶಗೊಂಡಿದ್ದು, ಕಾಂಗ್ರೆಸ್ ಕಾನೂನು ಘಟಕದ ನಿಯಮದ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಎಸ್ ಗೌರಿಶಂಕರ್ ಅವರು ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.

Exit mobile version