ಚಿಕ್ಕಮಗಳೂರು: ಕಳಸದ ಅರಣ್ಯಾಧಿಕಾರಿಯೊಬ್ಬ ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.
ಡಿ.ಆರ್.ಎಪ್.ಓ ದರ್ಶನ್ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿ.ಎಪ್.ಓ ನಂದೀಶ್ ಅಮಾನತು ಮಾಡಿ ಆದೇಶ ಹೊರಡಿಸಿಲಾಗಿತ್ತು. ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಹಿನ್ನಲೆ ಕಳಸದ ಡಿಆರ್ಎಫ್ಓ ದರ್ಶನ್ ಎಂಬಾತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾತ್ತು. ದರ್ಶನ್ ಹುಲಿಯ ಉಗುರಿನ ಡಾಲರ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶೋಕಿ ಮಾಡಿದ್ದ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ದರ್ಶನ್ ಫೋಟೋ ಡಿಲಿಟ್ ಕೂಡ ಮಾಡಿದ್ದ.