Site icon newsroomkannada.com

ಇಸ್ರೇಲ್‌ ಸಂಕಷ್ಟ: ಕನ್ನಡಿಗರ ನೆರವಿಗೆ ಹೆಲ್ಪ್‌ ಲೈನ್‌ ಆರಂಭಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಇಸ್ರೇಲ್‌ನಲ್ಲಿ ಹಮಾಸ್‌ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಿದ್ದು, ಇಸ್ರೇಲಿಗರ ಮೇಲೆ ರಣಭೀಕರ ದಾಳಿ ಮಾಡುತ್ತಿದ್ದಾರೆ. ಈ ನಡುವೆ ಇಸ್ರೇಲ್‌ನಲ್ಲಿ ನಲೆಸಿರುವ ಸಾವಿರಾರು ಭಾರತೀಯರು ನೆಲೆಸಿದ್ದು, ಅದರಲ್ಲೂ ಕನ್ನಡಿಗರು ಸಹ ಇದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿಯೇ ಸಹಾಯವಾಣಿ ಸಂಖ್ಯೆ (Help Line) ಬಿಡುಗಡೆ ಮಾಡಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಸ್ತುತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಇಸ್ರೇಲ್‌ನಲ್ಲಿ ನಲೆಸಿರುವ ಎಲ್ಲ ಭಾರತೀಯರು ಸುರಕ್ಷಾ ಮತ್ತು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಜನನಿಬಿಡ ಪ್ರದೇಶಗಳ ಮೇಲೆ ರಾಕೆಟ್ ದಾಳಿ ಮುಂದುವರಿದಿದ್ದು, ಇನ್ನೊಂದೆಡೆ ಇಸ್ರೇಲ್ ಪ್ರವೇಶಿಸಿರುವ ಹಮಾಸ್ ಉಗ್ರರು ಇಸ್ರೇಲಿ ಪ್ರಜೆಗಳನ್ನು ಅಪಹರಿಸುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಮನೆಯಿಂದ ಆಚೆ ಬರದಂತೆ ಸೂಚಿಸಲಾಗಿದೆ. ದೇಶದ ಜನರು ಅದರಲ್ಲೂ ಕನ್ನಡಿಗರು ಸಹ ಸ್ಥಳೀಯ ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಿಕೊಂಡಿದ್ದಾರೆ.

ಅನಗತ್ಯ ಪ್ರಯಾಣಗಳನ್ನು ತಪ್ಪಿಸಬೇಕು ಮತ್ತು ಸುರಕ್ಷತಾ ಅಶ್ರಯಗಳ (Bomb Shelter) ಹತ್ತಿರ ಇರುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸುವಂತೆ ಹೇಳಲಾಗಿದೆ. ಸಹಾಯವಾಣಿ ತುರ್ತು ಸಂದರ್ಭದಲ್ಲಿ +97235226748 ನಲ್ಲಿ ಸಂಪರ್ಕಿಸಿ ಅಥವಾ consl.telaviv@mea.gov.in ನಲ್ಲಿ e-ಮೇಲ್ ಸಂದೇಶವನ್ನು ಕಳುಹಿಸುವಂತೆ ತಿಳಿಸಲಾಗಿದೆ.

ಕರ್ನಾಟಕದಿಂದ ಇಸ್ರೇಲ್‌ಗೆ ಬಂದಿರುವ ಕನ್ನಡಿಗರು ಅಥವಾ ಯಾವುದೇ ಭಾರತೀಯ ನಾಗರಿಕರಿಗೆ ಸಹಾಯದ ಅಗತ್ಯವಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ: 080222340676, 08022253707 ಎಂದು ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ.

Exit mobile version