Site icon newsroomkannada.com

ಇಂದು ಕೀಳಂಜೆ ಶಾಲೆ ಹಳೇ ವಿದ್ಯಾರ್ಥಿಗಳ ಸಮ್ಮಿಲನ

ಉಡುಪಿ: ಕೀಳಂಜೆ ಬಿ.ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಚಿಣ್ಣರ ಬಾನಂಗಳ, ಗುರುವಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಸಂಜೆ 6.30ಕ್ಕೆ ನಡೆಯಲಿದೆ. ಶಾಸಕ ಯಶ್‌ ಪಾಲ್‌ ಸುವರ್ಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕಾರ್ಯಕ್ರಮ ಉದ್ಘಾಟಿಸುವರು. ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಹಾವಂಜೆ ಗ್ರಾಪಂ ಅಧ್ಯಕ್ಷೆ ಆಶಾ ಡಿ. ಪೂಜಾರಿ, ಬೆಂಗಳೂರಿನ ಉದ್ಯಮಿ ಪಟ್ಟಾಭಿರಾಮ ಮಧ್ಯಸ್ಥ, ಮುಳ್ಳುಗುಡ್ಡೆ ಶಿವಪುರ ಕ್ಷೇತ್ರ ಧರ್ಮ ದರ್ಶೀ ಪುನೀತ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮೊದಲಾದ ಗಣ್ಯರು ಪಾಲ್ಗೊಳ್ಳುವರು. ಶಾಲಾ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ನಿವೃತ್ತ ಶಿಕ್ಷಕ ಕೆ. ಸದಾನಂದ ಹೆಗ್ಡೆ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.

Exit mobile version